
ಭದ್ರತಾ ಪಡೆ
ಶ್ರೀನಗರ: ಜಮ್ಮು–ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಇಂದು (ಮಂಗಳವಾರ) ಪ್ರವಾಸಿಗರನ್ನು ಗುರಿಯಾಗಿಸಿ ಉಗ್ರರು ನಡೆಸಿದ ದಾಳಿಯಲ್ಲಿ ಹಲವರು ಮೃತಪಟ್ಟಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಂಭಾಷಣೆ ನಡೆಸಿದ್ದಾರೆ.
ಗೃಹ ಸಚಿವರಿಂದ ಮಾಹಿತಿ ಪಡೆದುಕೊಂಡಿರುವ ಪ್ರಧಾನಿ, ತುರ್ತಾಗಿ ಪರಿಸ್ಥಿತಿ ನಿಭಾಯಿಸಲು ಸೂಕ್ರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಅಲ್ಲದೆ ತುರ್ತಾಗಿ ಕೇಂದ್ರಾಡಳಿತ ಪ್ರದೇಶಕ್ಕೆ ಭೇಟಿ ನೀಡುವಂತೆ ಶಾ ಅವರಿಗೆ ತಿಳಿಸಿದ್ದಾರೆ.
ಪಹಲ್ಗಾಮ್‌ನ ಪ್ರಮುಖ ಪ್ರವಾಸಿ ಕೇಂದ್ರವನ್ನು ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ದಾಳಿಯ ಹೊಣೆಯನ್ನು ಈವರೆಗೂ ಯಾವುದೇ ಸಂಘಟನೆಗಳು ಹೊತ್ತುಕೊಂಡಿಲ್ಲ.
ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತೆ ಬಿಗಿಗೊಳಿಸಲಾಗಿದ್ದು, ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾವಿನ ನಿಖರ ಸಂಖ್ಯೆ ಕುರಿತು ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.