ವಿನಯ್ ನರ್ವಾಲ್ ಪತ್ನಿ ಹಿಮಾಂಶಿ ಮತ್ತು ರಾಹುಲ್ ಗಾಂಧಿ
ಚಂಡಿಗಢ: ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ನೌಕಾಪಡೆ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಕುಟುಂಬ ಸದಸ್ಯರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಮಂಗಳವಾರ) ಭೇಟಿಯಾಗಿದ್ದಾರೆ.
ಮಧ್ಯಾಹ್ನ ಹರಿಯಾಣದ ಕರ್ನಾಲ್ ತಲುಪಿದ ರಾಹುಲ್ ಅವರು ನರ್ವಾಲ್ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ರೋಹ್ಟಕ್ ಸಂಸದ ದೀಪೇಂದರ್ ಸಿಂಗ್ ಹೂಡಾ ಸೇರಿದಂತೆ ಪಕ್ಷದ ಇತರ ನಾಯಕರು ಉಪಸ್ಥಿತರಿದ್ದರು.
‘ಪಹಲ್ಗಾಮ್ ದಾಳಿಯಲ್ಲಿ ಹುತಾತ್ಮರಾದ ವಿನಯ್ ನರ್ವಾಲ್ ಅವರ ಮನೆಗೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದ್ದಾರೆ’ ಎಂದು ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ತಿಳಿಸಿದೆ.
ಏಪ್ರಿಲ್ 22ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಸ್ಥಳೀಯರೊಬ್ಬರು ಸೇರಿ 26 ಮಂದಿ ಪ್ರವಾಸಿಗರು ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.