ADVERTISEMENT

Pahalgam Terror Attack: ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

ಪಿಟಿಐ
Published 23 ಏಪ್ರಿಲ್ 2025, 9:03 IST
Last Updated 23 ಏಪ್ರಿಲ್ 2025, 9:03 IST
<div class="paragraphs"><p>ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ</p></div>

ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

   

ಶ್ರೀನಗರ: ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಇಂದು (ಬುಧವಾರ) ಬಿಡುಗಡೆಗೊಳಿಸಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು.

ADVERTISEMENT

ಈ ಕೃತ್ಯದಲ್ಲಿ ಭಾಗಿಯಾಗಿರುವ ಪಾಕಿಸ್ತಾನ ಮೂಲದ ಮೂವರನ್ನು ಆಸೀಫ್ ಫೌಜಿ, ಸುಲೇಮಾನ್ ಶಾ ಮತ್ತು ಅಬು ತಲ್ಹಾ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬದುಕುಳಿದವರ ಸಹಾಯದಿಂದ ರೇಖಾಚಿತ್ರವನ್ನು ಬಿಡಿಸಲಾಗಿದೆ. ಈ ಮೂವರು ಮೂಸಾ, ಯೂನಸ್ ಹಾಗೂ ಆಸೀಫ್ ಎಂಬ ಹೆಸರುಗಳನ್ನು ಹೊಂದಿದ್ದರು ಎಂದು ಹೇಳಲಾಗಿದೆ.

ಪೂಂಚ್‌ನಲ್ಲಿ ಭಯೋತ್ಪಾದಕ ಸಂಬಂಧ ಕೃತ್ಯಗಳಲ್ಲಿ ಶಂಕಿತ ಉಗ್ರರು ಭಾಗಿಯಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಮೂಲದ ನಿಷೇಧಿತ ಲಷ್ಕರ್‌–ಎ–ತಯಬಾ ಬೆಂಬಲಿತ ಉಗ್ರ ಸಂಘಟನೆಯಾದ ರೆಸಿಸ್ಟನ್ಸ್ ಫ್ರಂಟ್ (ಟಿಆರ್‌ಎಫ್) ದಾಳಿಯ ಹೊಣೆ ಹೊತ್ತುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.