ADVERTISEMENT

ಪ್ರಧಾನಿ ಮೋದಿಗೆ ಶುಭಾಶಯ ಕೋರಿದ ಪಾಕ್ ಪ್ರಧಾನಿ

​ಪ್ರಜಾವಾಣಿ ವಾರ್ತೆ
Published 26 ಮೇ 2019, 12:06 IST
Last Updated 26 ಮೇ 2019, 12:06 IST
   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಕರೆ ಮಾಡಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಲೋಕಸಭಾ ಚುನಾವಣೆಯಗೆಲುವಿಗೆ ಶುಭಾಶಯ ಕೋರಿದ್ದಾರೆ.

ಇಬ್ಬರ ನಡುವೆ ಕೆಲ ನಿಮಿಷಗಳ ಮಾತುಕತೆ ನಡೆದಿದ್ದು, ಈ ಸಮಯದಲ್ಲಿ ಎರಡೂ ದೇಶಗಳ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಕಳೆದ ಅಧಿಕಾರಾವಧಿಯಲ್ಲಿಇದ್ದ ನೆರೆಹೊರೆ ರಾಷ್ಟ್ರಗಳ ನಡುವಿನಉತ್ತಮ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು, ಎರಡೂ ರಾಷ್ಟ್ರಗಳಲ್ಲಿರುವ ಬಡತನವನ್ನು ನಿರ್ಮೂಲನೆ ಮಾಡಲು ಒಬ್ಬರಿಗೊಬ್ಬರು ಸಹಕಾರ ನೀಡುವುದೂ ಸೇರಿದಂತೆ ಹಲವು ವಿಚಾರಗಳನ್ನು ಚರ್ಚಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT