ADVERTISEMENT

ಜಮ್ಮು & ಕಾಶ್ಮೀರ: ಗಡಿಯಲ್ಲಿ ಪಾಕ್ ಡ್ರೋನ್ ಪತ್ತೆ, ಭದ್ರತಾ ಪಡೆಗಳಿಂದ ಶೋಧ

ಪಿಟಿಐ
Published 4 ಅಕ್ಟೋಬರ್ 2025, 5:34 IST
Last Updated 4 ಅಕ್ಟೋಬರ್ 2025, 5:34 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಎ.ಐ ಚಿತ್ರ

ಸಾಂಬಾ / ಜಮ್ಮು: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ಗಡಿ ಸಮೀಪ ಇರುವ ಮುಂಚೂಣಿ ಪ್ರದೇಶದ ಗ್ರಾಮವೊಂದರಲ್ಲಿ ಪಾಕಿಸ್ತಾನಿ ಡ್ರೋನ್ ಹಾರಾಟ ಕಂಡುಬಂದ ಬೆನ್ನಲ್ಲೇ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ADVERTISEMENT

ಪಾಕಿಸ್ತಾನ ಕಡೆಯಿಂದ ಬಂದ ಡ್ರೋನ್ ರೀತಿಯ ವಸ್ತುವೊಂದು ರಾಮಗಢ ಪ್ರಾಂತ್ಯದ ನಂಗಾ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಹಾರಾಡುವುದು ಕಂಡು ಬಂದಿದೆ ಎಂದು ಅವರು ತಿಳಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಭದ್ರತಾ ಪಡೆಗಳು ಹಾಗೂ ಪೊಲೀಸರು ದೌಡಾಯಿಸಿದ್ದು, ಗಡಿಯಲ್ಲಿ ಮಾದಕವಸ್ತುಗಳು ಅಥವಾ ಶಸ್ತ್ರಾಸ್ತ್ರಗಳನ್ನು ಕೆಳಗೆ ಹಾಕಿಲ್ಲ ಎಂದು ಖಚಿತ ಪಡಿಸಿಕೊಳ್ಳಲು ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಮುನ್ನೆಚರಿಕಾ ಕ್ರಮವಾಗಿ ಪಕ್ಕದ ಗ್ರಾಮದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.