ADVERTISEMENT

ಪಂಜಾಬ್: ಇಬ್ಬರು ಪಾಕಿಸ್ತಾನಿ ನುಸುಳುಕೋರರನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಪಿಟಿಐ
Published 3 ಜನವರಿ 2023, 7:24 IST
Last Updated 3 ಜನವರಿ 2023, 7:24 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಂಡಿಗಡ: ಭಾರತ - ಪಾಕಿಸ್ತಾನ ಅಂತರಾಷ್ಟ್ರೀಯ ಗಡಿಯಲ್ಲಿ ಮಂಗಳವಾರ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಶಸ್ತ್ರಸಜ್ಜಿತ ಪಾಕಿಸ್ತಾನಿ ನುಸುಳುಕೋರರನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನುಸುಳುಕೋರರಿಂದ ಬಂದೂಕುಗಳು ಸೇರಿದಂತೆ ಜೀವಂತ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಿಗ್ಗೆ 8 ಗಂಟೆ ಸುಮಾರಿಗೆ ಗುರುದಾಸ್‌ಪುರ ಸೆಕ್ಟರ್‌ನಲ್ಲಿ ಶಂಕಿತ ನುಸುಳುಕೋರನೊಬ್ಬನ ಚಲನವಲನಗಳನ್ನು ಗಮನಿಸಿ ಆತನನ್ನು ಹತ್ಯೆ ಮಾಡಲಾಗಿದೆ.

ADVERTISEMENT

ಮತ್ತೊಂದೆಡೆ ಅಮೃತಸರದ ದರಿಯಾ ಮನ್ಸೂರ್ ಗ್ರಾಮದ ಬಳಿ ಮತ್ತೊಬ್ಬ ನುಸುಳುಕೋರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.