ಪಾಕ್ ಕಾಮಿಕೇಜ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಭಾರತೀಯ ಸೇನೆ
(ಚಿತ್ರ ಕೃಪೆ–@adgpi)
ಅಮೃತಸರ: ಪಂಜಾಬ್‌ನ ಅಮೃತಸರವನ್ನು ಗುರಿಯಾಗಿಸಿಕೊಂಡು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಹಾರಿಸಿದ ಕಾಮಿಕೇಜ್ ಡ್ರೋನ್‌ಗಳನ್ನು ಭಾರತೀಯ ಸೇನೆಯ ವಾಯು ರಕ್ಷಣಾ (ಎಎಡಿ) ಪಡೆ ಶನಿವಾರ ಬೆಳಗಿನ ಜಾವ ಯಶಸ್ವಿಯಾಗಿ ಹೊಡೆದುರುಳಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಜನನಿಬಿಡ ಪ್ರದೇಶಗಳನ್ನು ಗುರಿಯಾಗಿಸಿ, ಬೈಕರ್ ಯಿಹಾ III ಮಾದರಿಗಳೆಂದು ಗುರುತಿಸಲಾದ ಡ್ರೋನ್‌ಗಳನ್ನು ಬೆಳಿಗ್ಗೆ 5 ಗಂಟೆ ಸುಮಾರಿಗೆ ಪಾಕ್ ಹಾರಿಸಿತ್ತು.
ತ್ವರಿತವಾಗಿ ಪ್ರತಿಕ್ರಿಯಿಸಿದ ಭಾರತೀಯ ಸೇನೆಯ ವಾಯು ರಕ್ಷಣಾ (ಎಎಡಿ) ಪಡೆಗಳು, ಡ್ರೋನ್‌ಗಳು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸಿದ ಕೆಲವೇ ಸೆಕೆಂಡುಗಳಲ್ಲಿ ಅವುಗಳನ್ನು ಪತ್ತೆಹಚ್ಚಿ ನಾಶಪಡಿಸಿತು ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ಸ್ಫೋಟಕ ಪೇಲೋಡ್‌ಗಳನ್ನು ಹೊತ್ತ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ. ಇದರಿಂದ ಯಾವುದೇ ಸಾವುನೋವುಗಳು ಅಥವಾ ನಾಗರಿಕ ಆಸ್ತಿಗೆ ಹಾನಿಯಾಗಿಲ್ಲ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.