ರಣಧೀರ ಜೈಸ್ವಾಲ್
ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ(ಪಿಒಕೆ) ಮುಗ್ಧ ಪ್ರತಿಭಟನಕಾರರ ಮೇಲೆ ದೌರ್ಜನ್ಯ ಎಸಗುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿರುವ ಹೊಣೆಗಾರಿಕೆಯನ್ನು ಪಾಕಿಸ್ತಾನ ಹೊರಬೇಕು ಎಂದು ಭಾರತ ಶುಕ್ರವಾರ ಆಗ್ರಹಿಸಿದೆ.
‘ಪಾಕಿಸ್ತಾನಿ ಪಡೆಗಳಿಂದ ಮುಗ್ಧ ಜನರ ಮೇಲಿನ ದೌರ್ಜನ್ಯ ಸೇರಿದಂತೆ ಪಿಒಕೆಯಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಇದು ಪಾಕಿಸ್ತಾನದ ದಬ್ಬಾಳಿಕೆಯ ವಿಧಾನ. ಬಲವಂತವಾಗಿ ಹಾಗೂ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿನ ಸಂಪನ್ಮೂಲಗಳನ್ನು ಲೂಟಿ ಮಾಡಿರುವುದರ ಪರಿಣಾಮ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಮೂಲಭೂತ ಹಕ್ಕುಗಳು ಮತ್ತು ನ್ಯಾಯವನ್ನು ಒದಗಿಸುವಂತೆ ಹಾಗೂ ವ್ಯವಸ್ಥಿತ ದಬ್ಬಾಳಿಕೆಯನ್ನು ಕೊನೆಗೊಳಿಸುವಂತೆ ಆಗ್ರಹಿಸಿ ಪಿಒಕೆಯ ಹಲವು ಪ್ರದೇಶಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.