ಬಂಧನ
ಗುರುದಾಸಪುರ: ಗಡಿ ದಾಟಿ ಭಾರತದೊಳಕ್ಕೆ ಬಂದಿದ್ದ ಪಾಕಿಸ್ತಾನಿ ಪ್ರಜೆಯನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸೋಮವಾರ ಬಂಧಿಸಿದೆ.
ಸಹಾಪುರ ಬಳಿಯ ಗಡಿ ಔಟ್ ಪೋಸ್ಟ್‌ನಲ್ಲಿ ಮೇ 3ರಂದು ರಾತ್ರಿ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧರು, ಗಡಿ ಬೇಲಿಯಿಂದ ಸುಮಾರು 250 ಮೀ. ನಷ್ಟು ಒಳಭಾಗದಲ್ಲಿ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಚಲನವಲನ ಗಮನಿಸಿದ್ದಾರೆ.
ಪಾಕಿಸ್ತಾನಿ ಪ್ರಜೆ ಎಂದು ಗುರುತಿಸಲಾದ ಆ ವ್ಯಕ್ತಿ ಯೋಧರನ್ನು ಕಂಡಾಗ ಸಮೀಪದ ಪೊದೆಯಲ್ಲಿ ಅಡಗಿ ಕುಳಿತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕ್ಷಿಪ್ರ ಕಾರ್ಯಾಚರಣೆ ಪಡೆಯ ಜೊತೆಗೆ ಬಿಎಸ್‌ಎಫ್ ಸಿಬ್ಬಂದಿ ಆ ಪ್ರದೇಶವನ್ನು ಸುತ್ತುವರಿದು ತಡರಾತ್ರಿಯಲ್ಲಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾದರು ಎಂದಿದ್ದಾರೆ.
ಬಂಧಿತ ಪಾಕ್ ಪ್ರಜೆಯನ್ನು ಗುಜ್ರಾನ್‌ವಾಲಾ ಗ್ರಾಮದ ನಿವಾಸಿ ಹಸ್ನೈನ್ ಎಂದು ಗುರುತಿಸಲಾಗಿದೆ.
ಅಧಿಕಾರಿಗಳು ಆತನನ್ನು ವಿಚಾರಣೆಗೆ ಒಳಪಡಿಸಿದ್ದು, ಪಾಕ್ ಕರೆನ್ಸಿ ಮತ್ತು ಗುರುತಿನ ಚೀಟಿಯನ್ನು ವಶಪಡಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.