ADVERTISEMENT

ಪಾಕಿಸ್ತಾನದಿಂದ 3,186 ಬಾರಿ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ

ಪಿಟಿಐ
Published 14 ಸೆಪ್ಟೆಂಬರ್ 2020, 15:54 IST
Last Updated 14 ಸೆಪ್ಟೆಂಬರ್ 2020, 15:54 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ನವದೆಹಲಿ: ಜಮ್ಮು ಪ್ರದೇಶದ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಎಂಟು ತಿಂಗಳಲ್ಲಿ ಪಾಕಿಸ್ತಾನವು 3,186 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ಸರ್ಕಾರ ಸೋಮವಾರ ತಿಳಿಸಿದೆ.

‘ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದ ಜೊತೆಗೆ ಜ.1ರಿಂದ ಆ.31ರವರೆಗೆ 242 ಬಾರಿ ಗುಂಡಿನ ಚಕಮಕಿ ನಡೆದಿದೆ’ ಎಂದು ರಕ್ಷಣಾ ಇಲಾಖೆ ರಾಜ್ಯ ಸಚಿವ ಶ್ರೀಪಾದ್‌ ನಾಯಕ್‌ ರಾಜ್ಯಸಭೆಯಲ್ಲಿ ಉತ್ತರಿಸಿದರು.

‘ಸೆ.7ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಎಂಟು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಸೇನೆ ಹಾಗೂ ಬಿಎಸ್‌ಎಫ್‌ ಕದನವಿರಾಮ ಉಲ್ಲಂಘನೆಗೆ ತಕ್ಕ ಪ‍್ರತ್ಯುತ್ತರ ನೀಡಿದೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.