ಶೆಲ್ ದಾಳಿಯಿಂದ ಹಾನಿಗೊಂಡಿರುವ ಮನೆ
ಜಮ್ಮು: ಗುರುವಾರ ರಾತ್ರಿ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಡೆಸಿದ ಶೆಲ್ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಮನೆಗಳಿಗೆ ಹಾನಿಯಾಗಿದೆ.
ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಸ್ಥಳಿಯರು, ಪಾಕಿಸ್ತಾನದ ಶೆಲ್ ದಾಳಿಯಿಂದಾಗಿ ಸುಮಾರು 20 ಮನೆಗಳಿಗೆ ಹಾನಿಯಾಗಿದೆ. ನನ್ನ ಇಡೀ ಕುಟುಂಬ ರಾತ್ರಿಯಿಡೀ ಒಂದು ಕೋಣೆಯಲ್ಲಿ ಕುಳಿತು ಕಳೆದಿದೆ. ನಮಗೆ ಇಲ್ಲಿ ಶಾಂತಿ ಬೇಕಿದೆ’ ಎಂದು ಅಳಲು ತೋಡಿಕೊಂಡಿದ್ದಾರೆ.
ಶೆಲ್ ದಾಳಿಯಿಂದ ಅರ್ಧಂಬರ್ಧ ಕುಸಿದಿದ್ದ ಮನೆಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯರು ಸಂಪೂರ್ಣ ನೆಲಸಮ ಮಾಡಿದ್ದಾರೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭೇಟಿಯಾಗಲು ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಶುಕ್ರವಾರ ಆಸ್ಪತ್ರೆಗೆ ದೌಡಾಯಿಸಿದ್ದರು.
‘ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಬೇಕಿದೆ, ಹೀಗಾಗಿ ನಾವು ಭಾರತೀಯ ಸೇನೆಯೊಂದಿಗೆ ನಿಲ್ಲುತ್ತೇವೆ’ ಎಂದು ಕಾಶ್ಮೀರಿ ಜನಗಳು ಅಭಿಪ್ರಾಯಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.