ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆ ಭಾನುವಾರ ಅಪ್ರಚೋದಿತವಾಗಿ ಶೆಲ್ ದಾಳಿ ನಡೆಸಿದೆ. ಭಾರತೀಯ ಸೇನೆಯು ಇದಕ್ಕೆ ಪ್ರತ್ಯುತ್ತರ ನೀಡಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಬೆಳಿಗ್ಗೆ 6.45 ಗಂಟೆ ವೇಳೆಗೆ ಮನ್ಕೊಟ್ ವಲಯದ್ಲಿ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮವನ್ನು ಉಲ್ಲಂಘಿಸಿದೆ. ಯಾವುದೇ ಹಾನಿ ಸಂಭವಿಸಿಲ್ಲ. ಭಾರತೀಯ ಸೇನೆಯೂ ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದು, ತಕ್ಕ ಉತ್ತರ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.