ADVERTISEMENT

ಕದನ ವಿರಾಮ ಉಲ್ಲಂಘನೆ: ಪೂಂಚ್ ಜಿಲ್ಲೆಯ ಎಲ್‌ಒಸಿಯಲ್ಲಿ ಪಾಕ್‌ ದಾಳಿ

ಗುಂಡಿನ ಚಕಮಕಿ

ಪಿಟಿಐ
Published 11 ಸೆಪ್ಟೆಂಬರ್ 2020, 7:40 IST
Last Updated 11 ಸೆಪ್ಟೆಂಬರ್ 2020, 7:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಕದನ ವಿರಾಮ ಉಲ್ಲಂಘನೆ ಮುಂದುವರಿಸಿರುವ ಪಾಕಿಸ್ತಾನದ ಸೈನಿಕರು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ತೀವ್ರ ಗುಂಡಿನ ದಾಳಿ ಹಾಗೂ ಶೆಲ್‌ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ನಿಯಂತ್ರಣ ರೇಖೆ ಸುತ್ತಮುತ್ತಲಿನ ಪ್ರದೇಶವನ್ನೇ ಗುರಿಯಾಗಿಸಿಕೊಂಡು ಕಳೆದ ಮೂರು ದಿನಗಳಿಂದ ಪಾಕಿಸ್ತಾನ ಸೇನಾ ತುಕಡಿಗಳು ಗುಂಡಿನ ದಾಳಿ ನಡೆಸುತ್ತಿದ್ದಾರೆ.

‘ಶುಕ್ರವಾರ ಬೆಳಿಗ್ಗೆ 8.30ರ ಸಮಯದಲ್ಲಿ ಪೂಂಚ್‌ ಜಿಲ್ಲೆಯ ಮನ್‌ಕೋಟೆ ಸೆಕ್ಟರ್‌ನಲ್ಲಿ ಪಾಕ್ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಅಪ್ರಚೋದಿತ ಗುಂಡಿನ ದಾಳಿ ಮತ್ತು ಶೆಲ್‌ ದಾಳಿ ನಡೆಸಿದ್ದಾರೆ‘ ಎಂದು ರಕ್ಷಣಾ ಇಲಾಖೆ ವಕ್ತಾರರು ತಿಳಿಸಿದ್ದಾರೆ. ಇದೇ ರೀತಿ ಬುಧವಾರವೂ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಸಮೀಪವಿರುವ ಮಾಲ್ತಿ ಮತ್ತು ದೇಗ್ವಾರ್ ಸೆಕ್ಟರ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದರು.

ADVERTISEMENT

ಸೆಪ್ಟೆಂಬರ್ 2 ರಂದು ಪಾಕ್ ಪಡೆ ರಾಜೌರಿಯ ಕೇರಿ ಸೆಕ್ಟರ್‌ನಲ್ಲಿ ಗಡಿ ನಿಯಂತ್ರಣ ರೇಖೆ ಉದ್ದಕ್ಕೂ ನಡೆಸಿದ ಗುಂಡಿನ ದಾಳಿಗೆ ಭಾರತೀಯ ಯೋಧರೊಬ್ಬರು ಬಲಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.