ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿಯಿರುವ ತಪಾಸಣಾ ಕೇಂದ್ರ ಹಾಗೂ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿಗೊಂಡು ಪಾಕಿಸ್ತಾನಿ ಸೇನೆಯು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.
ಶನಿವಾರ ರಾತ್ರಿ 9.45ರ ಸುಮಾರಿಗೆಹೀರಾನಗರ ವಲಯದ ಪಾನ್ಸಾರ್–ಮನ್ಯಾರಿ ಪ್ರದೇಶದಲ್ಲಿ ಪಾಕಿಸ್ತಾನದ ಸೇನೆಯು ದಾಳಿ ನಡೆಸಿದೆ. ಇದಕ್ಕೆ ಗಡಿ ಭದ್ರತಾ ಪಡೆಯು(ಬಿಎಸ್‌ಎಫ್) ತಕ್ಕ ಪ್ರತ್ಯುತ್ತರ ನೀಡಿದೆ. ಭಾನುವಾರ ಬೆಳಿಗ್ಗೆ 5.10ರ ತನಕ ಸೇನೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದರಿಂದಾಗಿ ಗಡಿ ಪ್ರದೇಶದ ನಿವಾಸಿಗಳು ಭೂಗತ ಬಂಕರ್‌ನಲ್ಲಿ ರಾತ್ರಿ ಕಳೆಯಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದರು.
ಈ ಗುಂಡಿನ ಚಕಮಕಿಯಲ್ಲಿ ಯಾವುದೇ ಪ್ರಾಣಹಾನಿ ವರದಿಯಾಗಿಲ್ಲ ಎಂದು ಅವರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.