ಜಮ್ಮು: ಜಮ್ಮು–ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಮಂಗಳವಾರ ಭಾರಿ ಗುಂಡಿನ ದಾಳಿ ನಡೆಸಿದೆ. ಭಾರತೀಯ ಸೇನೆಯೂ ತಕ್ಕ ತಿರುಗೇಟು ನೀಡಿದೆ ಎಂದು ಸೇನೆ ವಕ್ತಾರರು ತಿಳಿಸಿದ್ದಾರೆ.
‘ಪೂಂಛ್ ಜಿಲ್ಲೆಯ ಮಾನ್‌ಕೋಟೆ ವಲಯದಲ್ಲಿ ಇಂದು ಬೆಳಿಗ್ಗೆ 6.30ರ ವೇಳೆಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ’ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.
ಗುಂಡಿನ ಚಕಮಕಿ ಈಗಲೂ ಮುಂದುವರಿದೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.