ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಗುಂಡು ಮತ್ತು ಶೆಲ್ ದಾಳಿ ನಡೆಸುವ ಮೂಲಕ ಪಾಕಿಸ್ತಾನ ಸೇನೆಯು ಮತ್ತೆ ಕದನ ವಿರಾಮ ಉಲ್ಲಂಘಿಸಿದೆ ಎಂದು ಅಧಿಕಾರಿಗಳುಬುಧವಾರ ತಿಳಿಸಿದರು.
ಪಾಕಿಸ್ತಾನವು ಕೆರ್ನಿ,ಕಸ್ಬಾ ಮತ್ತು ಶಹಪುರ್ ಸೆಕ್ಟರ್ ಬಳಿ ಗುಂಡು ಮತ್ತು ಶೆಲ್ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡಿದೆ. ಈ ತಿಂಗಳಲ್ಲಿ ಪಾಕಿಸ್ತಾನಿ ಸೇನೆಯು ಒಟ್ಟು 37 ಬಾರಿ ಕದನ ವಿರಾಮ ಉಲ್ಲಂಘಿಸಿದೆ ಎಂದು ರಕ್ಷಣಾ ವಕ್ತಾರರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.