ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಸಮೀಪ ಪಾಕಿಸ್ತಾನ ಸೇನೆ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ರಕ್ಷಣಾ ವಕ್ತಾರರೊಬ್ಬರು ಬುಧವಾರ ತಿಳಿಸಿದರು.
ಭಾರತೀಯ ಸೇನೆಯು ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಿದೆ. ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದರು.
ಮಂಗಳವಾರ ರಾತ್ರಿ 1.10ರ ಸುಮಾರಿಗೆ ಪಾಕಿಸ್ತಾನ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ ಎಂದು ಮೂಲಗಳು ತಿಳಿಸಿವೆ.
ಸ್ಫೋಟ ಮತ್ತು ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ ಐವರು ಯೋಧರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.