ADVERTISEMENT

ಜಮ್ಮುವಿನಲ್ಲಿ ಪಾಕ್‌ ಬೆಂಬಲಿತ ಭಯೋತ್ಪಾದನೆ ಗುಂಪುಗಳಿಂದ ಸಮಸ್ಯೆ ಸೃಷ್ಟಿ: ಡಿಜಿಪಿ

ಪಿಟಿಐ
Published 16 ಸೆಪ್ಟೆಂಬರ್ 2021, 5:01 IST
Last Updated 16 ಸೆಪ್ಟೆಂಬರ್ 2021, 5:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪುಗಳು ನಿರಂತರವಾಗಿ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದು, ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಕದನ ವಿರಾಮದ ನಿಯಮ ಜಾರಿಯಲ್ಲಿರುವ ಹೊರತಾಗಿಯೂ ಒಳನುಸುಳುವ ಪ್ರಯತ್ನವನ್ನು ನಡೆಸುತ್ತಿವೆಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ದಿಲ್‌ಭಾಗ್ ಸಿಂಗ್ ತಿಳಿಸಿದ್ದಾರೆ.

ಹಾಗಿದ್ದರೂ ಭಯೋತ್ಪಾದಕರ ಒಳನುಸುಳುವ ಪ್ರಯತ್ನವನ್ನು ಮಟ್ಟ ಹಾಕಲಾಗಿದೆ ಎಂದು ಹೇಳಿದ್ದಾರೆ.

ಜಮ್ಮುವಿನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ನಡೆದ ಉನ್ನತ ಸಭೆಯಲ್ಲಿ ಮಾತನಾಡಿದ ಅವರು, ಉಗ್ರರ ನೆಲೆ ಹಾಗೂ ಸಂಪರ್ಕ ಜಾಲವನ್ನು ನಿರ್ನಾಮ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭಯೋತ್ಪಾದಕರ ಎಲ್ಲ ಪ್ರಯತ್ನಗಳನ್ನು ವಿಫಲಗೊಳಿಸಲಾಗುವುದು. ದೇಶ ಅಥವಾ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಇತರೆ ಭದ್ರತಾ ಪಡೆಗಳ ಜೊತೆಗೂಡಿ ನಾಗರಿಕರ ಭದ್ರತೆ ಹಾಗೂ ಶಾಂತಿಯನ್ನುಕಾಪಾಡಲು ಪ್ರಯತ್ನಿಸುತ್ತಿವೆ. ಅಲ್ಲದೆ ಶಾಂತಿಯ ವಾತಾವರಣಕ್ಕೆ ಭಂಗವನ್ನುಂಟು ಮಾಡಲು ಪ್ರಯತ್ನಿಸುವವರನ್ನು ಮಟ್ಟ ಹಾಕಲಾಗುವುದು ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.