ADVERTISEMENT

ಗುಜರಾತ್‌: ಅಂತರರಾಷ್ಟ್ರೀಯ ಗಡಿ ದಾಟಿದ ಪಾಕ್‌ ಪ್ರೇಮಿಗಳ ಬಂಧನ

ಪಿಟಿಐ
Published 25 ನವೆಂಬರ್ 2025, 13:21 IST
Last Updated 25 ನವೆಂಬರ್ 2025, 13:21 IST
<div class="paragraphs"><p>ಬಂಧನ  </p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಕಛ್‌(ಗುಜರಾತ್‌): ಅಕ್ರಮವಾಗಿ ಇಲ್ಲಿನ ಅಂತರರಾಷ್ಟ್ರೀಯ ಗಡಿ ದಾಟಿದ ಪಾಕಿಸ್ತಾನದ ಯುವಕ–ಯುವತಿಯನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್‌) ಯೋಧರು ಸೋಮವಾರ ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪೊಪಟ್‌(24) ಮತ್ತು ಗೌರಿ(20) ಬಂಧಿತರು. ಅಂತರರಾಷ್ಟ್ರೀಯ ಗಡಿಯಿಂದ 8 ಕಿ.ಮೀ. ದೂರದಲ್ಲಿ ಪಾಕಿಸ್ತಾನದೊಳಗಿನ ಗ್ರಾಮದ ನಿವಾಸಿಗಳು. ಕುಟುಂಬದವರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನೆಬಿಟ್ಟು ಬಂದ ಈ ಪ್ರೇಮಿಗಳು ಭಾನುವಾರ ಕಾಲ್ನಡಿಗೆಯಲ್ಲೇ 8 ಕಿ.ಮೀ. ಕ್ರಮಿಸಿ ಅಂತರರಾಷ್ಟ್ರೀಯ ಗಡಿ ದಾಟಿದ್ದಾರೆ ಎಂದು ಬಾಲಸರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಡಿಯಲ್ಲಿ ಗಸ್ತು ತಿರುಗುತ್ತಿದ್ದ ಬಿಎಸ್‌ಎಫ್‌ ಸಿಬ್ಬಂದಿ( ಕಂಬ ಸಂಖ್ಯೆ 1016 ಬಳಿ) ಇವರನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದರು.

‘ಕುಟುಂಬದವರು ನಮ್ಮ ಮದುವೆಗೆ ವಿರೋಧಿಸಿದ್ದರಿಂದ, ಮನೆ ಬಿಟ್ಟು ಬಂದಿದ್ದೇವೆ’ ಎಂದು ಪ್ರೇಮಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಅಧಿಕಾರಿ ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಎಫ್‌ಐಆರ್ ದಾಖಲಿಸಿಲ್ಲ. ಸಂಬಂಧಿಸಿದ ಸಂಸ್ಥೆಗಳು ಈ ಕುರಿತು ಹೆಚ್ಚಿನ ತನಿಖೆ ನಡೆಸಲಿವೆ ಎಂದು ಪೊಲೀಸರು ತಿಳಿಸಿದರು.

ಪೊಲೀಸ್ ಮೂಲಗಳ ಪ್ರಕಾರ, ಎರಡು ತಿಂಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಇದಕ್ಕೂ ಮೊದಲು ಅಕ್ಟೋಬರ್ 8ರಂದು ಇದೇ ರೀತಿ ಗಡಿಯಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.