ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಇರುವ ಹಳ್ಳಿಗಳ ಮೇಲೆ ಎರಡು ಪಾಕಿಸ್ತಾನಿ ಡ್ರೋನ್‌ಗಳು ಸುಳಿದಾಡುತ್ತಿರುವುದು ಕಂಡುಬಂದಿದ್ದು, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಘಗ್ವಾಲ್ ಪ್ರದೇಶದ ಚಲ್ಲಿಯಾರಿ ಗ್ರಾಮ ಮತ್ತು ರಾಮಗಢದ ಚಮ್ಲಿಯಾಲ್ ಗ್ರಾಮದ ಮೇಲೆ ಡ್ರೋನ್‌ಗಳು ಕಾಣಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರೊಂದಿಗೆ ಸೇರಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್)ಎರಡೂ ಪ್ರದೇಶಗಳನ್ನು ಸುತ್ತುವರೆದಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಗಡಿಯ ಈ ಭಾಗದಲ್ಲಿ ಯಾವುದೇ ಶಸ್ತ್ರಾಸ್ತ್ರ ಪ್ರಯೋಗ ಅಥವಾ ಮಾದಕ ದ್ರವ್ಯಗಳ ಸಾಗಣೆ ಬಗ್ಗೆ ಕಣ್ಗಾವಲು ಇಡಲಾಗಿದೆ.
ಇತ್ತೀಚಿನ ವರದಿಗಳು ಬಂದಾಗ ಶೋಧ ಕಾರ್ಯಾಚರಣೆಗಳು ಮುಂದುವರೆದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.