ಡ್ರೋನ್ (ಸಾಂದರ್ಭಿಕ ಚಿತ್ರ)
ನವದೆಹಲಿ/ಚಂಡೀಗಢ: ‘ಪಂಜಾಬ್‌ನ ಅಂತರರಾಷ್ಟ್ರೀಯ ಗಡಿ ಮೂಲಕ ಭಾರತದತ್ತ ಸಾಗಿ ಬರುತ್ತಿದ್ದ ಪಾಕಿಸ್ತಾನದ ಆರು ಡ್ರೋನ್‌ಗಳನ್ನು ಗಡಿ ಭದ್ರತಾ ಪಡೆ ಸಿಬ್ಬಂದಿ (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ’ ಎಂದು ಬಿಎಸ್‌ಎಫ್ ವಕ್ತಾರರೊಬ್ಬರು ಗುರುವಾರ ತಿಳಿಸಿದ್ದಾರೆ.
ಅಮೃತಸರದ ಮೋಧೆ ಗ್ರಾಮದ ವ್ಯಾಪ್ತಿಯಲ್ಲಿ 5 ಡ್ರೋನ್‌ಗಳು ಕಾಣಿಸಿಕೊಂಡಿದ್ದವು. ಗಸ್ತಿನಲ್ಲಿದ್ದ ಸಿಬ್ಬಂದಿ ಗುಂಡು ಹಾರಿಸಿ ಅವುಗಳನ್ನು ನೆಲಕ್ಕುರುಳಿಸಿದ್ದು, ಮೂರು ಪಿಸ್ತೂಲ್‌ಗಳು, ಮೂರು ಮ್ಯಾಗಜೀನ್‌ಗಳು ಮತ್ತು ಒಂದು ಕೆಜಿಗೂ ಹೆಚ್ಚು ತೂಕದ ನಾಲ್ಕು ಹೆರಾಯಿನ್ ಪ್ಯಾಕೆಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುರುವಾರ ಮುಂಜಾನೆ ಅಟ್ಟಾರಿ ಗ್ರಾಮದ ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿದ್ದು, ಎರಡು ಮ್ಯಾಗಜೀನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತರಣ್ ತರಣ್ ಜಿಲ್ಲೆಯ ದಾಲ್ ಗ್ರಾಮದ ಬಳಿ ನಡೆದ ಕಾರ್ಯಾಚರಣೆ ವೇಳೆ ಭತ್ತದ ಗದ್ದೆಯಲ್ಲಿ ಪಿಸ್ತೂಲ್ ಮತ್ತು ಮ್ಯಾಗಜೀನ್ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.