ರಮೇಶ್ ತಾವಡ್ಕರ್
Credit: X/@ramesh_tawadkar
ಪಣಜಿ: ಕಾಣಕೋಣ ನಗರದ ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜ ಬಿಡಿಸಿರುವುದು ಕಂಡುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಗೋವಾ ಲೋಕಸಭಾ ಸ್ಪೀಕರ್ ರಮೇಶ್ ತಾವಡ್ಕರ್ ನೇತೃತ್ವದ ತಂಡ ಪೊಲೀಸರಿಗೆ ದೂರು ದಾಖಲಿಸಿದೆ.
ಕಾಣಕೋಣ ಕ್ಷೇತ್ರದ ಶಾಸಕರಾಗಿರುವ ರಮೇಶ್ ತಾವಡ್ಕರ್ ಅವರು, ಕ್ಯಾನಕೋನಾ ನಗರದ ಮೂರು ರಸ್ತೆಗಳಲ್ಲಿ ಪಾಕಿಸ್ತಾನದ ಧ್ವಜವನ್ನು ಬಿಡಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಅಪರಿಚಿತ ವ್ಯಕ್ತಿಗಳು ಅಥವಾ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಜತೆಗೆ, ಭಾರತೀಯ ನ್ಯಾಯ ಸಂಹಿತೆಯ ಪ್ರಕಾರ ಪ್ರಕರಣದ ತನಿಖೆ ನಡೆಸಬೇಕು’ ಎಂದು ತಾವಡ್ಕರ್ ಒತ್ತಾಯಿಸಿದ್ದಾರೆ.
‘ಯಾರೂ ಕೂಡ ಭಾರತದ ಯಾವುದೇ ಆಸ್ತಿಯ ಮೇಲೆ ಪಾಕಿಸ್ತಾನದ ಧ್ವಜವನ್ನು ಚಿತ್ರಿಸಬಾರದು. ಬದಲಾಗಿ ಪ್ರತಿಯೊಬ್ಬ ಭಾರತೀಯರು ಪಾಕಿಸ್ತಾನದ ವಿರುದ್ಧ ಸಾರ್ವಜನಿಕವಾಗಿ ಪ್ರತಿಭಟಿಸಬೇಕು’ ಎಂದು ಕಾಂಗ್ರೆಸ್ ನಾಯಕ ಸುನಿಲ್ ಕವ್ತಂಕರ್ ಕರೆ ನೀಡಿದ್ದಾರೆ.
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದನಾ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ದಾಳಿಯ ಬೆನ್ನಲ್ಲೇ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.