ADVERTISEMENT

ಪಾಕಿಸ್ತಾನ ಪರ ಬೇಹುಗಾರಿಕೆ ಶಂಕೆ: ರಾಜಸ್ಥಾನದಲ್ಲಿ ಸರ್ಕಾರಿ ನೌಕರನ ಬಂಧನ

ಪಿಟಿಐ
Published 29 ಮೇ 2025, 6:28 IST
Last Updated 29 ಮೇ 2025, 6:28 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಜೈಪುರ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸುತ್ತಿದ್ದ ಶಂಕೆಯ ಮೇಲೆ ರಾಜಸ್ಥಾನದ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ. 

ADVERTISEMENT

ಶಕುರ್ ಖಾನ್‌ ಬಂಧಿತ ವ್ಯಕ್ತಿ. ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದ ಕಾರ್ಯನಿರ್ವಹಿಸುತ್ತಿದ್ದ ಗುಪ್ತಚರ ಇಲಾಖೆಯ ತಂಡ ಬುಧವಾರ ರಾತ್ರಿ ಶಕುರ್‌ ಖಾನ್‌ ಅನ್ನು ಬಂಧಿಸಿದೆ.

ಖಾನ್‌, ಜಿಲ್ಲಾ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರ ಫೋನ್‌ನಲ್ಲಿ ಪಾಕಿಸ್ತಾನಕ್ಕೆ ಸಂಬಂಧಿಸಿದ ನಂಬರ್‌ಗಳು ದೊರೆತಿವೆ. ಅಲ್ಲದೆ ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿರಬಹುದು ಎಂಬ ಮಾಹಿತಿ ಇತ್ತು. ಹೀಗಾಗಿ ಅವರ ಮೇಲೆ ನಿಗಾ ಇರಿಸಲಾಗಿತ್ತು. ಮಾಹಿತಿ ಆಧರಿಸಿ ಬುಧವಾರ ರಾತ್ರಿ ಅವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ

ಖಾನ್ ಅವರನ್ನು ಕೇಂದ್ರ ತನಿಖಾ ತಂಡ ವಿಚಾರಣೆ ನಡೆಸಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.