ಪಾಕಿಸ್ತಾನ
ಇಸ್ಲಾಮಾಬಾದ್ (ಪಿಟಿಐ): ಭಾರತದ ರಾಜತಾಂತ್ರಿಕ ಅಧಿಕಾರಿಯನ್ನು ಕರೆಸಿಕೊಂಡಿದ್ದ ಪಾಕಿಸ್ತಾನ ವಿದೇಶಾಂಗ ಇಲಾಖೆ ಭಾರತದ ದಾಳಿಯ ವಿರುದ್ಧ ಪ್ರತಿಭಟನೆ ದಾಖಲಿಸಿದೆ.
ಪಾಕಿಸ್ತಾನದ ಪಂಜಾಬ್ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿನ ನಗರಗಳ ಮೇಲೆ ಮಧ್ಯರಾತ್ರಿ ನಡೆದ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು. 46 ಜನ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಸೇನೆ ತಿಳಿಸಿದೆ.
‘ಪಾಕಿಸ್ತಾನದ ತೀವ್ರ ಪ್ರತಿಭಟನೆಯನ್ನು ದಾಖಲಿಸುವ ಸಲುವಾಗಿ ಭಾರತದ ರಾಜತಾಂತ್ರಿಕ ಅಧಿಕಾರಿಯನ್ನು ವಿದೇಶಾಂಗ ಇಲಾಖೆಯ ಕಚೇರಿಗೆ ಕರೆಸಿಕೊಳ್ಳಲಾಗಿತ್ತು’ ಎಂದು ಪಾಕಿಸ್ತಾನ ವಿದೇಶಾಂಗ ಕಚೇರಿಯ ಪ್ರಕಟಣೆ ತಿಳಿಸಿದೆ.
ಭಾರತದ ಆಕ್ರಮಣಕಾರಿ ನಡೆಯಿಂದ ಪಾಕಿಸ್ತಾನದ ಸಾರ್ವಭೌಮತ್ವದ ಉಲ್ಲಂಘನೆಯಾಗಿದೆ. ಇಂತಹ ಕೃತ್ಯಗಳು ವಿಶ್ವಸಂಸ್ಥೆಯ ನಿಯಮಗಳು, ಅಂತರರಾಷ್ಟ್ರೀಯ ಕಾನೂನು ಮತ್ತು ಅಂತರರಾಷ್ಟ್ರೀಯ ಸಂಬಂಧಗಳಿಗೆ ಸಂಬಂಧಿಸಿದ ನಿಯಮಗಳಿಗೆ ವಿರುದ್ಧವಾಗಿವು ಎಂದು ಭಾರತ ರಾಯಭಾರಿಗೆ ತಿಳಿಸಿರುವುದಾಗಿ ಪಾಕಿಸ್ತಾನ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.