ಶ್ರೀನಗರ:ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ವಲಯದಲ್ಲಿ ಗುಂಡಿನ ದಾಳಿ ನಡೆಸಿದೆ.
ಪಾಕಿಸ್ತಾನದ ಸೇನೆಯದಾಳಿಗೆ ಭಾರತೀಯ ಭದ್ರತಾಪಡೆಯ ಯೋಧರು ಪ್ರತಿ ದಾಳಿ ನಡೆಸುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.
ಸೋಮವಾರ ಬೆಳಗಿನಜಾವ 3ರಿಂದ ಗುಂಡಿನ ದಾಳಿ ಆರಂಭಿಸಿದ್ದು, ಬೆಳಿಗ್ಗೆ 6ರ ವರೆಗೆ ದಾಳಿ ಪ್ರತಿದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿದ್ದಾಗಿ ಎಎನ್‌ಐ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.