ADVERTISEMENT

ಜಮ್ಮು: ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 26 ಡಿಸೆಂಬರ್ 2020, 6:03 IST
Last Updated 26 ಡಿಸೆಂಬರ್ 2020, 6:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ಪಾಕಿಸ್ತಾನದ ಸೇನೆಯು ಕಠುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿಯ ಮುಂಚೂಣಿ ಠಾಣೆಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು.

‘ಪಾಕಿಸ್ತಾನಿ ಸೇನೆಯು ಶುಕ್ರವಾರ ರಾತ್ರಿ 9.35 ಕ್ಕೆ ಹಿರಾನಗರ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿ ಬಳಿ ಅಪ್ರಚೋದಿತ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿದೆ. ಇದಕ್ಕೆ ಗಡಿ ಭದ್ರತಾ ಪಡೆಯೂ(ಬಿಎಸ್‌ಎಫ್‌) ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಅವರು ಹೇಳಿದರು.

ಎರಡು ದೇಶಗಳ ನಡುವೆ ಶನಿವಾರ ಮುಂಜಾನೆ 2.45 ತನಕ ಗುಂಡಿನ ಚಕಮಕಿ ನಡೆದಿದೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.