ADVERTISEMENT

ಜಮ್ಮು–ಕಾಶ್ಮೀರ: ಪಾಕ್‌ ಸೇನೆಯಿಂದ ಗುಂಡಿನ ದಾಳಿ

ಪಿಟಿಐ
Published 21 ಫೆಬ್ರುವರಿ 2021, 7:28 IST
Last Updated 21 ಫೆಬ್ರುವರಿ 2021, 7:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಜಮ್ಮು: ‘ಜಮ್ಮು–ಕಾಶ್ಮೀರದ ಕಥುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯ ಬಳಿಯಿರುವಮುಂಚೂಣಿ ಠಾಣೆಗಳು ಮತ್ತು ಗ್ರಾಮಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನಿ ಸೇನೆಯು ಗುಂಡಿನ ದಾಳಿ ನಡೆಸಿದೆ’ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದರು.

‘ಹಿರಾನಗರ ಸೆಕ್ಟರ್‌ನ ಬೊಬಿಯಾ ಪ್ರದೇಶದಲ್ಲಿ ಶನಿವಾರ ರಾತ್ರಿ 10.25ಕ್ಕೆ ಪಾಕಿಸ್ತಾನಿ ಸೇನೆ ಗುಂಡಿನ ದಾಳಿ ನಡೆಸಿದೆ. ಇದಕ್ಕೆ ಗಡಿ ಭದ್ರತಾ ಪಡೆಯು(ಬಿಎಸ್‌ಎಫ್‌) ತಕ್ಕ ಪ್ರತ್ಯುತ್ತರ ನೀಡಿದೆ’ ಎಂದು ಅವರು ಹೇಳಿದರು.

‘ಭಾನುವಾರ ಬೆಳಿಗ್ಗೆ 4.30 ರ ತನಕ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಯಾವುದೇ ಪ್ರಾಣ ಮತ್ತು ಆಸ್ತಿ ಹಾನಿ ಸಂಭವಿಸಿಲ್ಲ’ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.