ADVERTISEMENT

ಪಾಕ್‌ನಿಂದ ಮತ್ತೆ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 16 ಜೂನ್ 2020, 6:15 IST
Last Updated 16 ಜೂನ್ 2020, 6:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನದ ಪಡೆಗಳು ಜಮ್ಮು–ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಮಂಗಳವಾರ ಅಪ್ರಚೋದಿತ ದಾಳಿ ನಡೆಸಿವೆ.

ಜಮ್ಮುವಿನ ತಂಗಧಾರ್‌ ಸೆಕ್ಟರ್‌, ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಬೆಳಿಗ್ಗೆ ದಾಳಿ ನಡೆಸಿರುವ ಪಾಕಿಸ್ತಾನ ಪಡೆಗಳಿಗೆ ಭಾರತೀಯ ಸೇನೆಯೂ ತಕ್ಕ ಉತ್ತರ ನೀಡಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ತಿಳಿಸಿದ್ದಾರೆ.

ಪ್ರಾಣ ಹಾನಿ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.