ADVERTISEMENT

ಭಾರತ್ ಜೋಡೊ ಯಾತ್ರೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ: ಬಿಜೆಪಿ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 9:09 IST
Last Updated 25 ನವೆಂಬರ್ 2022, 9:09 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಗುತ್ತಿರುವ ‘ಭಾರತ್ ಜೋಡೊ’ ಯಾತ್ರೆ  –ಪಿಟಿಐ ಚಿತ್ರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಾಗುತ್ತಿರುವ ‘ಭಾರತ್ ಜೋಡೊ’ ಯಾತ್ರೆ –ಪಿಟಿಐ ಚಿತ್ರ   

ನವದೆಹಲಿ:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಮಧ್ಯಪ್ರದೇಶದ ಖಾರ್ಗೋನ್‌ನಲ್ಲಿ ಸಾಗುತ್ತಿರುವ 'ಭಾರತ್ ಜೋಡೊ ಯಾತ್ರೆ' ವೇಳೆ ಶುಕ್ರವಾರ 'ಪಾಕಿಸ್ತಾನ ಜಿಂದಾಬಾದ್' ಘೋಷಣೆಗಳನ್ನು ಕೂಗಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ರಾಹುಲ್‌ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಬೆಂಬಲಿಗರೊಂದಿಗೆ ಮುನ್ನಡೆಯುತ್ತಿರುವ ವಿಡಿಯೊವನ್ನುಬಿಜೆಪಿ ನಾಯಕ ಅಮಿತ್‌ ಮಾಳವೀಯ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೇ ವಿಡಿಯೊವನ್ನು ಮಧ್ಯಪ್ರದೇಶ ಕಾಂಗ್ರೆಸ್‌ ಘಟಕವು ಟ್ವೀಟ್‌ ಮಾಡಿದ್ದು. ನಂತರ ಡಿಲೀಟ್ ಮಾಡಿದೆ ಎಂದು ತಿಳಿಸಿದ್ದಾರೆ.

ಆದರೆ, ಈ ಆರೋಪವನ್ನು ಕಾಂಗ್ರೆಸ್ ನಾಯಕ ಜೈರಾಮ್‌ ರಮೇಶ್‌ ಅಲ್ಲಗಳೆದಿದ್ದು, ಮಾಳವಿಯ ಹಂಚಿಕೊಂಡಿರುವ ವಿಡಿಯೊ ತಿರುಚಿರುವುದಾಗಿದೆ ಎಂದಿದ್ದಾರೆ.

ADVERTISEMENT

'ಭಾರತ್ ಜೋಡೊ ಯಾತ್ರೆಗೆಭಾರಿ ಜನ ಬೆಂಬಲ ವ್ಯಕ್ತವಾಗುತ್ತಿರುವುದರಿಂದಹತಾಶೆಗೊಂಡಿರುವ ಬಿಜೆಪಿ, ಅಪಪ್ರಚಾರ ಮಾಡುವ ಸಲುವಾಗಿ ತಿರುಚಿದ ವಿಡಿಯೊ ಬಿಡುಗಡೆ ಮಾಡಿದೆ.ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇಂತಹ ತಂತ್ರಗಳನ್ನು ಎದುರಿಸಲು ಸಿದ್ಧರಿದ್ದೇವೆ. ತಿರುಗೇಟು ನೀಡುತ್ತೇವೆ' ಎಂದು ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.