ADVERTISEMENT

ಪಾಕಿಸ್ತಾನ: ಜನಪ್ರಿಯ ಟಿಕ್‌ಟಾಕರ್ ಸನಾ ಯುಸೂಫ್‌ ಗುಂಡಿಕ್ಕಿ ಹತ್ಯೆ!

ಏಜೆನ್ಸೀಸ್
Published 3 ಜೂನ್ 2025, 11:20 IST
Last Updated 3 ಜೂನ್ 2025, 11:20 IST
<div class="paragraphs"><p>ಸನಾ ಯೂಸುಫ್‌</p></div>

ಸನಾ ಯೂಸುಫ್‌

   

ಚಿತ್ರ: X/@SidraUsafzai

ಇಸ್ಲಾಮಾಬಾದ್‌: ಪಾಕಿಸ್ತಾನದ ಜನಪ್ರಿಯ ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ ಸನಾ ಯುಸೂಫ್‌ ಅವರನ್ನು ಅವರ ನಿವಾಸದಲ್ಲಿಯೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ADVERTISEMENT

17 ವರ್ಷದ ಸನಾ ಯುಸೂಫ್‌ , ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 5 ಲಕ್ಷ ಹಿಂಬಾಲಕರನ್ನು ಹೊಂದಿದ್ದು, ಟಿಕ್‌ಟಾಕ್‌ ಮೂಲಕ ಭಾರಿ ಜನಪ್ರಿಯತೆ ಪಡೆದಿದ್ದರು. ಮಹಿಳಾ ಹಕ್ಕುಗಳು ಮತ್ತು ಶೈಕ್ಷಣಿಕ ಜಾಗೃತಿ ಬಗ್ಗೆ ತಮ್ಮ ವಿಡಿಯೊಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದರು.

‘ಇಸ್ಲಾಮಾಬಾದ್‌ನ ಸೆಕ್ಟರ್ ಜಿ-13ನಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಮನೆಗೆ ಪ್ರವೇಶಿಸಿದ್ದ ಆರೋಪಿ ಸನಾ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಆಕೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ’ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಸನಾ ಅವರದ್ದು ಮರ್ಯಾದೆಗೇಡು ಹತ್ಯೆಯಾಗಿರಬಹುದು ಎಂದು ಅವರು ಶಂಕಿಸಿದ್ದಾರೆ.

ಸನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಸ್ಥಳಾಂತರಿಸಲಾಗಿದೆ. ಪ್ರಕರಣ ಸಂಬಂಧ ಈವರೆಗೆ ಯಾರನ್ನು ಬಂಧಿಸಿಲ್ಲ ಎಂದು ವರದಿಗಳು ತಿಳಿಸಿವೆ.

ದೇಶದಲ್ಲಿ ಯುವ ಮಹಿಳಾ ಇನ್‌ಫ್ಲುಯೆನ್ಸರ್‌ಗಳನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗೆ ಈ ಪ್ರಕರಣವು ಸೇರ್ಪಡೆಯಾಗಿದೆ. ವರ್ಷದ ಆರಂಭದಲ್ಲಿ ಟಿಕ್‌ಟಾಕ್‌ನಲ್ಲಿ ವಿಡಿಯೊಗಳನ್ನು ಪೋಸ್ಟ್ ಮಾಡಿದ್ದಕ್ಕಾಗಿ 15 ವರ್ಷದ ಹಿರಾ ಎಂಬ ಬಾಲಕಿಯನ್ನು ಆಕೆಯ ತಂದೆ ಮತ್ತು ಚಿಕ್ಕಪ್ಪ ಗುಂಡಿಕ್ಕಿ ಕೊಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.