ADVERTISEMENT

ಜಮ್ಮು–ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2022, 12:47 IST
Last Updated 19 ಜೂನ್ 2022, 12:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಭಾನುವಾರ ನಡೆದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾದ (ಎಲ್‌ಇಟಿ) ಇಬ್ಬರು ಉಗ್ರರ ಹತ್ಯೆಯಾಗಿದ್ದು, ಕುಲ್ಗಾಮ್ ಜಿಲ್ಲೆಯಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಕಾಶ್ಮೀರದ ಲೋಲಾಬ್ ಪ್ರದೇಶದಲ್ಲಿ ಬಂಧಿತ ಭಯೋತ್ಪಾದಕ ಶೌಕತ್ ಅಹ್ಮದ್ ಶೇಖ್‌ ನೀಡಿದ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಾಚರಣೆ ಪ್ರಾರಂಭಿಸಿದ ನಂತರ ಕುಪ್ವಾರದಲ್ಲಿ ಎನ್‌ಕೌಂಟರ್ ಪ್ರಾರಂಭವಾಯಿತು. ಒಬ್ಬ ಎಲ್‌ಇಟಿ ಸಂಘಟನೆ ಸೇರಿದ್ದು, ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

’ಅಡಗುತಾಣಗಳ ಹುಡುಕಾಟದ ಸಮಯದಲ್ಲಿ ಅಡಗಿದ್ದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದರು. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.2-3 ಭಯೋತ್ಪಾದಕರು ಎನ್‌ಕೌಂಟರ್‌ನಲ್ಲಿ ಸಿಕ್ಕಿಬಿದ್ದಿದ್ದಾರೆ. ಭಾರಿ ಗುಂಡಿನ ಚಕಮಕಿ ನಡೆಯುತ್ತಿದೆ ‘ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.