ADVERTISEMENT

ಮಾದಕವಸ್ತು ಸಾಗಾಟ: ಪಾಕಿಸ್ತಾನದ ಎಂಟು ಮಂದಿ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ

ಪಿಟಿಐ
Published 15 ಏಪ್ರಿಲ್ 2021, 6:07 IST
Last Updated 15 ಏಪ್ರಿಲ್ 2021, 6:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಹಮದಾಬಾದ್‌: ದೋಣಿಯ ಮೂಲಕ ಅಪಾರ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪಾಕಿಸ್ತಾನದ ಎಂಟು ಮಂದಿಯನ್ನು ಗುರುವಾರ ಮುಂಜಾನೆ ಬಂಧಿಸಲಾಗಿದೆ.

ಗುಜರಾತ್‌ನ ಭಯೋತ್ಪಾದಕ ನಿಗ್ರಹ ಪಡೆ(ಎಟಿಎಸ್‌) ಮತ್ತು ಭಾರತೀಯ ಕರಾವಳಿ ಕಾವಲು ಪಡೆ ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿತು.

ಬಂಧಿತರಿಂದ 30 ಕೆ.ಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ ₹150 ಕೋಟಿ ಎಂದು ಎಟಿಎಸ್‌ ತಿಳಿಸಿದೆ.

ADVERTISEMENT

ಅರಬ್ಬೀಸಮುದ್ರದಲ್ಲಿನ ಅಂತರಾಷ್ಟ್ರೀಯ ಸಾಗರ ಗಡಿ ರೇಖೆಯ ಸಮೀಪದಲ್ಲಿ ದೋಣಿಯ ಮೂಲಕ ಮಾದಕ ವಸ್ತುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಜಂಟಿ ಕಾರ್ಯಪಡೆ ತಂಡ ಬಂಧಿಸಿದೆ ಎಂದು ಎಟಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.