ನವದೆಹಲಿ :ಪ್ಯಾನ್‌ಗೆ ಆಧಾರ್ ಜೋಡಿಸಲು ನೀಡಿದ್ದ ಗಡುವನ್ನು 2022ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಜನರು ಎದುರಿಸುತ್ತಿರುವ ಸಂಕಷ್ಟಗಳನ್ನು ಗಮನದಲ್ಲಿ ಇಟ್ಟುಕೊಂಡು ಗಡುವು ವಿಸ್ತರಣೆ ಮಾಡಲಾಗಿದೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿಯು (ಸಿಬಿಡಿಟಿ) ಪ್ರಕಟಣೆಯಲ್ಲಿ ತಿಳಿಸಿದೆ. ಈ ಮುಂಚೆ 2021ರ ಸೆಪ್ಟೆಂಬರ್ 30ರ ಗಡುವು ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.