ADVERTISEMENT

ಪಂಚಾಯಿತಿ ಚುನಾವಣೆಯಲ್ಲಿ ಎನ್‌ಸಿ ಅಭ್ಯರ್ಥಿಗಳ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2020, 6:12 IST
Last Updated 17 ಫೆಬ್ರುವರಿ 2020, 6:12 IST

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದಿನ ತಿಂಗಳು ನಡೆಯಲಿರುವ ಪಂಚಾಯಿತಿ ಚುನಾವಣೆಯಲ್ಲಿ ನ್ಯಾಷನಲ್‌ ಕಾನ್ಫೆರೆನ್ಸ್‌ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ’ ಎಂದು ಪಕ್ಷದ ಕೇಂದ್ರ ವಿಭಾಗದ ಕಾರ್ಯದರ್ಶಿ ರತನ್‌ ಲಾಲ್‌ ಗುಪ್ತಾ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಮುಖ್ಯ ಚುನಾವಣಾಧಿಕಾರಿ ಶೈಲೇಂದ್ರ ಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಕೇಂದ್ರಾಡಳಿತ ಪ್ರದೇಶದ ಸುಮಾರು 11 ಸಾವಿರ ಪಂಚಾಯಿತಿ ಸ್ಥಾನಗಳಿಗೆ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲಿದ್ದು, ಮುಕ್ತ ಚುನಾವಣಾ ಪ್ರಚಾರ ನಡೆಸಲು ಬಂದ್‌ ಮಾಡಲಾಗಿರುವ ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪಕ್ಷದ ಅಧ್ಯಕ್ಷ ಫಾರೂಕ್‌ ಅಬ್ದುಲ್ಲಾ, ಉಪಾಧ್ಯಕ್ಷ ಒಮರ್‌ ಅಬ್ದುಲ್ಲಾ ಸೇರಿದಂತೆ ಹಿರಿಯ ನಾಯಕರು ಬಂಧನದಲ್ಲಿರುವುದರಿಂದ ಅವರು ಚುನಾವಣಾ ಕಾರ್ಯದಲ್ಲಿ ಪಾಲ್ಗೊಳ್ಳುವುದು ಸಾಧ್ಯವಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.