ADVERTISEMENT

ಪಶ್ಚಿಮ ಬಂಗಾಳದಲ್ಲಿ ಪಂಚಾಯಿತಿ ಚುನಾವಣೆ: ಬಿಗಿಭದ್ರತೆಗೆ ಹೈಕೋರ್ಟ್‌ ನಿರ್ದೇಶನ

ಪಶ್ಚಿಮ ಬಂಗಾಳ: ಜುಲೈ 8ಕ್ಕೆ ಪಂಚಾಯಿತಿ ಚುನಾವಣೆ

ಪಿಟಿಐ
Published 21 ಜೂನ್ 2023, 13:14 IST
Last Updated 21 ಜೂನ್ 2023, 13:14 IST
 ಮಮತಾ
ಮಮತಾ    

ಕೋಲ್ಕತ್ತ(ಪಿಟಿಐ): ಪಶ್ಚಿಮ ಬಂಗಾಳದಲ್ಲಿ ಜುಲೈ 8ರಂದು ಪಂಚಾಯಿತಿ ಚುನಾವಣೆ ನಡೆಯಲಿದ್ದು, ಮುಂಜಾಗ್ರತೆಯಾಗಿ 82 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆಗೆ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಕಲ್ಕತ್ತಾ ಹೈಕೋರ್ಟ್‌, ಬುಧವಾರ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. 

ರಾಜ್ಯದಲ್ಲಿ 2013ರ ವೇಳೆ ನಡೆದ ಪಂಚಾಯಿತಿ ಚುನಾವಣೆಯಲ್ಲೂ ಇಷ್ಟೇ ಸಂಖ್ಯೆಯ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ಚುನಾವಣಾ ಆಯೋಗವು, ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅಧ್ಯಕ್ಷತೆಯ ವಿಭಾಗೀಯ ಪೀಠದ ಗಮನಕ್ಕೆ ತಂದಿತು.

ದಶಕದ ಹಿಂದೆ ಪಶ್ಚಿಮ ಬಂಗಾಳದಲ್ಲಿದ್ದ 17 ಜಿಲ್ಲೆಗಳ ಸಂಖ್ಯೆ ಈಗ 22ಕ್ಕೇರಿದೆ. ಇದರಿಂದ ಯಾವುದೇ ಸಮಸ್ಯೆಯಾಗುವುದಿಲ್ಲ. ಆದರೆ, ಮತದಾರರ ಸಂಖ್ಯೆ ಹೆಚ್ಚಳವಾಗಿದೆ. ತ್ವರಿತವಾಗಿ ಅಗತ್ಯ ಇರುವ ರಕ್ಷಣಾ ಸಿಬ್ಬಂದಿಯ ನಿಯೋಜನೆಗೆ ಕ್ರಮಕೈಗೊಳ್ಳಬೇಕು ಎಂದು ಪೀಠವು ಸೂಚಿಸಿತು.

ADVERTISEMENT

ಚುನಾವಣೆಯಲ್ಲಿ ಹಿಂಸಾಚಾರ ತಲೆದೋರದಂತೆ ಮುಂಜಾಗ್ರತೆ ಕೈಗೊಳ್ಳುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಈ ನಿರ್ದೇಶನ ನೀಡಿದೆ. ಹಾಗಾಗಿ, ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಚುನಾವಣಾ ಆಯೋಗವು, ಕೇಂದ್ರ ಸರ್ಕಾರಕ್ಕೆ ಕೋರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.