ADVERTISEMENT

ಜಮ್ಮು ಮತ್ತು ಕಾಶ್ಮೀರ: ಮುಂದಿನ ವರ್ಷ ಪಂಚಾಯತ್‌ ಚುನಾವಣೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2022, 14:37 IST
Last Updated 10 ಡಿಸೆಂಬರ್ 2022, 14:37 IST
   

ಶ್ರೀನಗರ: ಜಮ್ಮು–ಕಾಶ್ಮೀರದಲ್ಲಿ ಮುಂದಿನ ವರ್ಷಪಂಚಾಯತ್‌ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ರಾಜ್ಯ ಚುನಾವಣಾ ಆಯೋಗ ಅಧಿಕಾರಿಗಳಿಗೆ ಸೂಚಿಸಿದೆ. ಆದರೆ, ಕೇಂದ್ರಾಡಳಿತ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಆತುರಪಡುತ್ತಿಲ್ಲ ಎನ್ನಲಾಗಿದೆ.

5 ತಿಂಗಳ ಕಾಲ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ನಂತರ ಅಂತಿಮ ಪಟ್ಟಿಯನ್ನು ಈಚೆಗೆ ಪ್ರಕಟಿಸಲಾಗಿದ್ದು, ಒಟ್ಟು 7,72,872 ಮಂದಿಯ ಹೆಸರು ಮತದಾರರ ಪಟ್ಟಿಯಲ್ಲಿ ಇದೆ. ಮುಂಬರುವ ಏಪ್ರಿಲ್‌ ಅಥವಾ ಮೇನಲ್ಲಿ ಪಂಚಾಯತ್‌ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಮತ್ತೊಮ್ಮೆ ಪಟ್ಟಿ ನವೀಕರಿಸಲು ಆಯೋಗ ಸೂಚಿಸಿದೆ.

2019ರಲ್ಲಿ ಸಂವಿಧಾನದ 370ನೇ ವಿಧಿ ರದ್ದಾದ ನಂತರ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆ ನಡೆದಿತ್ತು. ಈಗ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿದ್ದು, ಇದರ ಆಧಾರದ ಮೇಲೆ ಪಂಚಾಯತ್‌ ಚುನಾವಣೆ ನಡೆಯಲಿದೆ. ಆದರೆ, ವಿಧಾನಸಭಾ ಚುನಾವಣೆ ಯಾವಾಗ ನಡೆಯಲಿದೆ ಎಂಬುದು ಇನ್ನೂ ಖಚಿತವಾಗಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.