ADVERTISEMENT

ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲರ ಹತ್ಯೆ

ಪಿಟಿಐ
Published 24 ಮೇ 2025, 5:51 IST
Last Updated 24 ಮೇ 2025, 5:51 IST
<div class="paragraphs"><p>ಪಪ್ಪು ಲೋಹ್ರಾ</p></div>

ಪಪ್ಪು ಲೋಹ್ರಾ

   

ಲಾತೇಹಾರ್‌: ಜಾರ್ಖಂಡ್‌ನ ಲಾತೇಹಾರ್‌ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿದಂತೆ ಇಬ್ಬರು ನಕ್ಸಲರು ಹತರಾಗಿದ್ದಾರೆ.

ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌) ಹಾಗೂ ಜಾರ್ಖಂಡ್‌ ಪೊಲೀಸರು ಜಂಟಿಯಾಗಿ ಲಾತೇಹಾರ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ನಡೆಸಿದ ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ಈ ಇಬ್ಬರೂ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ADVERTISEMENT

ಇಬ್ಬರ ಶವಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡಿಐಜಿ ವೈ.ಎಸ್‌. ರಮೇಶ್‌ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ನಕ್ಸಲ್‌ನೊಬ್ಬನನ್ನು ಬಂಧಿಸಲಾಗಿದ್ದು, ಆತನ ಬಳಿಯಿದ್ದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಾರ್ಖಂಡ್‌ ಜನ ಮುಕ್ತಿ ಪರಿಷತ್‌ನ (ಜೆಜೆಎಂಪಿ) ಮುಖ್ಯಸ್ಥ ಪಪ್ಪು ಲೋಹ್ರಾ ಸುಳಿವು ನೀಡಿದವರಿಗೆ ₹ 10 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.