ADVERTISEMENT

ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ: ಪೊಲೀಸರನ್ನು ಪ್ರಶ್ನಿಸಿದ ಸಂಸದೀಯ ಸಮಿತಿ

ಪಿಟಿಐ
Published 13 ಜನವರಿ 2020, 19:45 IST
Last Updated 13 ಜನವರಿ 2020, 19:45 IST

ನವದೆಹಲಿ : ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿರುವ ಬಗ್ಗೆ ಸಂಸದೀಯ ಸಮಿತಿಯು ದೆಹಲಿ ಪೊಲೀಸರನ್ನು ಪ್ರಶ್ನಿಸಿದ್ದು, ವಿದ್ಯಾರ್ಥಿಗಳೊಂದಿಗೆ ಸಹಾನುಭೂತಿಯಿಂದ, ಪ್ರಬುದ್ಧವಾಗಿ ವರ್ತಿಸಬೇಕು ಎಂದು ಸೂಚಿಸಿತು ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರ ರಾಜಧಾನಿಯಲ್ಲಿ ಮೇಲಿಂದ ಮೇಲೆ ನಿರ್ಬಂಧಗಳನ್ನು ಹೇರುವುದರಿಂದ ಸಾಮಾನ್ಯ ಜನರಿಗೆ ತೊಂದರೆ ಆಗುತ್ತಿದೆ ಎಂದೂ ಸಮಿತಿ ಹೇಳಿದೆ.

ಕಾಂಗ್ರೆಸ್‌ ಸಂಸದ ಆನಂದ ಶರ್ಮಾ ಅಧ್ಯಕ್ಷತೆಯ ಗೃಹ ವ್ಯವಹಾರಗಳ ಸಂಸದೀಯ ಸಮಿತಿಯು, ದೆಹಲಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳ ಕುರಿತು ಚರ್ಚಿಸಲು ಸೋಮವಾರ ಕರೆದ ಸಭೆಯಲ್ಲಿ ಗೃಹ ಇಲಾಖೆಯ ಉನ್ನತ ಅಧಿಕಾರಿಗಳು, ದೆಹಲಿ ಪೊಲೀಸ್‌ ಕಮಿಷನರ್‌ ಅಮೂಲ್ಯ ಪಟ್ನಾಯಕ್‌, ಹರಿಯಾಣ ಡಿಜಿಪಿ ಮನೋಜ್‌ ಯಾದವ್‌, ಉತ್ತರ ಪ್ರದೇಶ, ರಾಜಸ್ಥಾನದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ADVERTISEMENT

ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯ ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆಗಳನ್ನು ಉಲ್ಲೇಖಿಸದೇ, ಪ್ರತಿಭಟನಾ ನಿರತ ವಿದ್ಯಾರ್ಥಿಗಳೊಂದಿಗೆ ಪೊಲೀಸರು ವರ್ತಿಸಿದ ರೀತಿಯ ಬಗ್ಗೆ ಸಮಿತಿ ಆಕ್ಷೇಪ ವ್ಯಕ್ತಪಡಿಸಿತು ಎಂದು ಮೂಲಗಳು ಹೇಳಿವೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.