ADVERTISEMENT

ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ: ಲೋಕಸಭೆಯಲ್ಲಿ ಓಂ ಬಿರ್ಲಾ ಅಸಮಾಧಾನ

ಪಿಟಿಐ
Published 6 ಫೆಬ್ರುವರಿ 2026, 10:25 IST
Last Updated 6 ಫೆಬ್ರುವರಿ 2026, 10:25 IST
ಓಂ ಬಿರ್ಲಾ
ಓಂ ಬಿರ್ಲಾ   

ನವದೆಹಲಿ: ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಶುಕ್ರವಾರವೂ ಕೂಡ ತೀವ್ರ ಪ್ರತಿಭಟನೆ ನಡೆಸಿದೆ. ಇದರಿಂದ ಅಸಮಾಧಾನಗೊಂಡ ಸ್ವೀಕರ್‌ ಓಂ ಬಿರ್ಲಾ, ಇಂತಹ ಸದನವನ್ನು ನಡೆಸಲು ಸಾಧ್ಯವಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

ಮಾಜಿ ಸೇನಾ ಮುಖ್ಯಸ್ಥ ನವರಣೆಯವರ ಅಪ್ರಕಟಿತ ಆತ್ಮಚರಿತ್ರೆ ಪ್ರಸ್ತಾಪ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ವಿರೋಧ ಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದರಿಂದ ಸದನದಲ್ಲಿ ಕಾಲಹರಣವಾಗಿದೆ ಬಿರ್ಲಾ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ಅಧಿವೇಶನದಲ್ಲಿ ಗದ್ದಲಗಳಿಂದ 19 ಗಂಟೆ 13 ನಿಮಿಷಗಳು ವ್ಯರ್ಥವಾಗಿವೆ ಎಂದು ಸ್ಪೀಕರ್ ಸದನಕ್ಕೆ ತಿಳಿಸಿದ್ದಾರೆ. ಸದಸ್ಯರು ಸದನವನ್ನು ಅಗೌರವಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ADVERTISEMENT

ಇಂದೂ ಸಹ ಸದನದ ಆರಂಭವಾದ ಬಳಿಕ ಗದ್ದಲ ಸೃಷ್ಟಿಯಾಯಿತು.

ಜನರು ತಮ್ಮ ಸಮಸ್ಯೆಗಳಿಗೆ ಲೋಕಸಭೆಯಲ್ಲಿ ಧ್ವನಿಯಾಗಲು ಸಂಸದರಾಗಿ ಆಯ್ಕೆ ಮಾಡುತ್ತಾರೆ. ಈ ರೀತಿ ಗದ್ದಲ ಸೃಷ್ಟಿಸಿ ಸದನದ ಕಾಲಹರಣ ಮಾಡಲು ಅಲ್ಲ ಎಂದು ಬಿರ್ಲಾ ಆಕ್ರೋಶ ವ್ಯಕ್ತ‍ಪಡಿಸಿದ್ದಾರೆ.

ಉಭಯ ಸದನಗಳ ಕಲಾಪವನ್ನು ಸೋಮವಾರ ಬೆಳಿಗ್ಗೆ 11 ಗಂಟೆಗೆ ಮುಂದೂಡಲಾಗಿದೆ.

ಭಾರತ ಮತ್ತು ಚೀನಾ ನಡುವೆ 2020ರಲ್ಲಿ ಲಡಾಖ್‌ನಲ್ಲಿ ನಡೆದ ಸೇನಾ ತಿಕ್ಕಾಟದ ಬಗ್ಗೆ, ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್‌ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಅಂಶಗಳ ಕುರಿತು ನಿಯತಕಾಲಿಕವೊಂದರಲ್ಲಿ ಪ್ರಕಟವಾಗಿರುವ ಲೇಖನವನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಲೋಕಸಭೆಯಲ್ಲಿ ಸೋಮವಾರ ಪ್ರಸ್ತಾಪಿಸಿದ್ದು ಭಾರಿ ಗದ್ದಲ ಎಬ್ಬಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.