ಗುರುಗ್ರಾಮ: ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಕಲಾಪಕ್ಕೆ ಅಡ್ಡಿಪಡಿಸುವುದನ್ನು ಕಡಿಮೆ ಮಾಡಬೇಕು ಎಂದು ಎಲ್ಲ ರಾಜಕೀಯ ಪಕ್ಷಗಳಿಗೆ ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಮನವಿ ಮಾಡಿದ್ದಾರೆ.
ಇಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು,‘ಕಲಾಪಕ್ಕೆ ಅಡ್ಡಿಪಡಿಸುವ ರಾಜಕೀಯ ಪಕ್ಷಗಳಿಗೆ ಜನರೇ ಸರಿಯಾದ ಪಾಠ ಕಲಿಸಬೇಕು. 18ನೇ ಲೋಕಸಭೆಯ ಚೊಚ್ಚಲ ಅಧಿವೇಶನದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಸಂದರ್ಭಗಳು ತೀರಾ ಕಡಿಮೆ ಇದ್ದವು ’ ಎಂದು ಅವರು ನೆನಪಿಸಿದರು.
‘ಹಿಂದಿನ ಅಭ್ಯಾಸಗಳನ್ನು ಬದಲಾಯಿಸುವ ಸಮಯ ಬಂದಿದೆ. ಪ್ರಜಾಪ್ರಭುತ್ವ ಬಲಪಡಿಸಬೇಕಿದ್ದರೆ, ಪ್ರಜಾತಂತ್ರ ಸಂಸ್ಥೆಗಳನ್ನು ಹೊಣೆಗಾರರನ್ನಾಗಿ ಮಾಡಬೇಕು. ಸದನವು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುವುದನ್ನು ಖಚಿತಪಡಿಸಕೊಳ್ಳಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.