ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವು ಸೋಮವಾರದಿಂದ ಆರಂಭವಾಗಲಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವ ಮಸೂದೆಯು ಸಂಸತ್ತಿನಲ್ಲಿ ಸೋಮವಾರವೇ ಮಂಡನೆ ಆಗಲಿದೆ.
ಈ ಅಧಿವೇಶನದಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆಯನ್ನು ಚರ್ಚೆ ಮಾಡದೆಯೇ ಅಂಗೀಕರಿಸಲು ಬಿಡುವುದಿಲ್ಲ. ಚರ್ಚೆಗೆ ಅವಕಾಶ ಕೊಡದೇ ಇದ್ದರೆ, ಕಲಾಪ ಸುಗಮವಾಗಿ ನಡೆಯವುದಿಲ್ಲ ಎಂದು ವಿರೋಧ ಪಕ್ಷಗಳು ಎಚ್ಚರಿಕೆ ನೀಡಿವೆ. ರೈತರ ಸಮಸ್ಯೆಗಳ ಬಗ್ಗೆ ಈ ಅಧಿವೇಶನದಲ್ಲಿ ವ್ಯಾಪಕವಾದ ಚರ್ಚೆ ನಡೆಯಬೇಕು. ಕನಿಷ್ಠ ಬೆಂಬಲ ಬೆಲೆ, ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸುವುದಾಗಿ ವಿರೋಧ ಪಕ್ಷಗಳು ಹೇಳಿವೆ.
ಪ್ರಧಾನಿ ಗೈರು: ಅಧಿವೇಶನ ಆರಂಭಕ್ಕೂ ಮುನ್ನಾ ದಿನವಾದ ಭಾನುವಾರ ಆಯೋಜಿಸಲಾಗಿದ್ದ ಸರ್ವಪಕ್ಷಗಳ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೈರುಹಾಜರಾಗಿದ್ದಾರೆ. ಪ್ರಧಾನಿಯ ಈ ನಡೆಯನ್ನು ವಿರೋಧ ಪಕ್ಷಗಳು ಟೀಕಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.