ADVERTISEMENT

ಜುಲೈ 21ರಿಂದ ಆಗಸ್ಟ್ 12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ: ಕಿರಣ್ ರಿಜಿಜು

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 9:56 IST
Last Updated 4 ಜೂನ್ 2025, 9:56 IST
<div class="paragraphs"><p>ಕಿರಣ್ ರಿಜಿಜು</p></div>

ಕಿರಣ್ ರಿಜಿಜು

   

– ಪಿಟಿಐ ಚಿತ್ರ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಜುಲೈ 21ರಿಂದ ಆಗಸ್ಟ್ 12ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ADVERTISEMENT

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯ ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಗಾರು ಅಧಿವೇಶನಕ್ಕೆ ದಿನಾಂಕಗಳನ್ನು ಶಿಫಾರಸು ಮಾಡಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಅಧಿವೇಶನ ಕರೆಯುವ ಶಿಫಾರಸು ಪತ್ರವನ್ನು ರಾಷ್ಟ್ರಪತಿಗೆ ಕಳುಹಿಸಲಾಗುವುದು ಎಂದರು.

ಪ್ರತಿ ಅಧಿವೇಶನವೂ ನಮಗೆ ವಿಶೇಷ ಅಧಿವೇಶನವಾಗಿದೆ ಎಂದ ಅವರು, ಎಲ್ಲಾ ಪ್ರಮುಖ ವಿಷಯಗಳನ್ನು ಸಂಸತ್ತಿನ ನಿಯಮಗಳ ಅಡಿಯಲ್ಲಿ ಇಲ್ಲಿ ಚರ್ಚಿಸಬಹುದು ಎಂದು ಹೇಳಿದರು.

ಚರ್ಚಿಸಬೇಕಾದ ವಿಷಯಗಳ ಬಗ್ಗೆ ಎರಡೂ ಸದನಗಳ ಸಲಹಾ ಸಮಿತಿಯು ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಅವರು ಒತ್ತಿ ಹೇಳಿದರು.

ಆಪರೇಷನ್ ಸಿಂಧೂರ ಕುರಿತು ಚರ್ಚಿಸಲು ವಿರೋಧ ಪಕ್ಷದ ನಾಯಕರು ವಿಶೇಷ ಅಧಿವೇಶನಕ್ಕೆ ಬೇಡಿಕೆ ಇಟ್ಟಿರುವ ಹಿನ್ನೆಲೆಯಲ್ಲಿ ರಿಜಿಜು ಅವರಿಂದ ಈ ಹೇಳಿಕೆ ಹೊರ ಬಿದ್ದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.