ADVERTISEMENT

ತೃತೀಯ ಲಿಂಗಿಗಳಿಗೆ ರಕ್ಷಣೆಯ ಹಕ್ಕು

ತೃತೀಯ ಲಿಂಗಿ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2019, 19:31 IST
Last Updated 26 ನವೆಂಬರ್ 2019, 19:31 IST
ರಾಜ್ಯಸಭಾ ಸದಸ್ಯರು
ರಾಜ್ಯಸಭಾ ಸದಸ್ಯರು   

ನವದೆಹಲಿ: ತೃತೀಯ ಲಿಂಗಿಗಳಿಗೆ ರಕ್ಷಣೆಯ ಹಕ್ಕು ನೀಡುವ ಮಸೂದೆಗೆ ಸಂಸತ್‌ ಮಂಗಳವಾರ ಅನುಮೋದನೆ ನೀಡಿದೆ.

ಇದರಿಂದ, ತೃತೀಯ ಲಿಂಗಿಗಳ ಸಾಮಾಜಿಕ, ಆರ್ಥಿಕ ಮತ್ತು ಶಿಕ್ಷಣ ಸಬಲೀಕರಣಕ್ಕೆ ಅವಕಾಶ ದೊರೆಯಲಿದೆ

ಈ ಮಸೂದೆಯನ್ನು ಪರಿಶೀಲನಾ ಸಮಿತಿಗೆ ಒಪ್ಪಿಸಬೇಕು ಎನ್ನುವ ನಿಲುವಳಿಗೆ ರಾಜ್ಯಸಭೆಯಲ್ಲಿ ಸೋಲಾಯಿತು. ಈ ಮೊದಲು ಲೋಕಸಭೆ ಈ ಮಸೂದೆಗೆ ಒಪ್ಪಿಗೆ ನೀಡಿತ್ತು.

ADVERTISEMENT

ತೃತೀಯ ಲಿಂಗಿಗಳ ಜತೆ ನಡೆಯುತ್ತಿರುವ ತಾರತಮ್ಯವನ್ನು ಹೋಗಲಾಡಿಸಲು ಕ್ರಮಕೈಗೊಳ್ಳಲಾಗಿದೆ. ಮಸೂದೆಯಲ್ಲಿರುವ ಅಂಶಗಳನ್ನು ಜಾರಿಗೊಳಿಸಲು ಸರ್ಕಾರ, ರಾಷ್ಟ್ರೀಯ ಮಂಡಳಿಯನ್ನು ಸ್ಥಾಪಿಸಲಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಥಾವರ್‌ ಚಂದ್‌ ಗೆಹ್ಲೋಟ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.