ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2020 ಮಾರ್ಚ್1ರ ವರೆಗೆ 8.72 ಲಕ್ಷ ಹುದ್ದೆಗಳು ಖಾಲಿ ಇದ್ದವು ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.
ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ), ಕೇಂದ್ರ ಲೋಕ ಸೇವಾ ಆಯೋಗ(ಯುಪಿಎಸ್ಸಿ) ಮತ್ತು ರೈಲ್ವೆ ನೇಮಕಾತಿ ಮಂಡಳಿಗಳು (ಆರ್ಆರ್ಬಿ) 2018–19 ಮತ್ತು 2020–21ರ ಅವಧಿಯಲ್ಲಿ 2.65 ಲಕ್ಷ ನೇಮಕಾತಿಗಳನ್ನು ನಡೆಸಿವೆ ಎಂದೂ ಲಿಖಿತ ಉತ್ತರದಲ್ಲಿ ಸಚಿವರು ತಿಳಿಸಿದ್ದಾರೆ.
ಸಿಬ್ಬಂದಿ ನೇಮಕಾತಿ ಮಾಡುವ ಯುಪಿಎಸ್ಸಿ ಯಲ್ಲೇ 485 ಹುದ್ದೆಗಳು ಖಾಲಿ ಬಿದ್ದಿವೆ. ಇದರಲ್ಲಿ ಎ ಗುಂಪಿನ 45, ಬಿ ಗುಂಪಿನ 240 ಮತ್ತು ಸಿ ಗುಂಪಿನ 200 ಹುದ್ದೆಗಳು ಸೇರಿವೆ ಎಂದು ಹೇಳಿದ್ದಾರೆ.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.