ADVERTISEMENT

ರಾಜ್ಯಸಭೆ| ಎಸ್‌ಪಿಜಿ ಭದ್ರತೆ ಹಿಂತೆಗೆತದಲ್ಲಿ ರಾಜಕೀಯವಿಲ್ಲ: ಕೇಂದ್ರ ಸ್ಪಷ್ಟನೆ

ಏಜೆನ್ಸೀಸ್
Published 20 ನವೆಂಬರ್ 2019, 6:54 IST
Last Updated 20 ನವೆಂಬರ್ 2019, 6:54 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ:ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಮತ್ತು ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಎಸ್‌ಪಿಜಿ (ವಿಶೇಷ ರಕ್ಷಣಾ ಪಡೆ) ಭದ್ರತೆಯನ್ನು ವಾಪಸ್ ಪಡೆದ ವಿಚಾರ ರಾಜ್ಯಸಭೆಯಲ್ಲಿ ಬುಧವಾರವೂ ಚರ್ಚೆಯಾಯಿತು.

ಈ ವಿಚಾರವಾಗಿ ಕೇಂದ್ರ ಸರ್ಕಾರದ ಪರ ಸ್ಪಷ್ಟನೆ ನೀಡಿದ ಬಿಜೆಪಿ ನಾಯಕ ಜೆ.ಪಿ.ನಡ್ಡಾ, ‘ಮನಮೋಹನ್ ಸಿಂಗ್ ಮತ್ತು ಗಾಂಧಿ ಕುಟುಂಬದವರಿಗೆ ನೀಡಲಾಗಿದ್ದ ಎಸ್‌ಪಿಜಿ ಭದ್ರತೆಯನ್ನು ಹಿಂಪಡೆದಿರುವುದು ರಾಜಕೀಯ ನಿರ್ಧಾರ ಅಲ್ಲ. ಗಣ್ಯ ವ್ಯಕ್ತಿಗಳಿಗೆ ಇರುವ ಬೆದರಿಕೆ ಆಧಾರದಲ್ಲಿ ಭದ್ರತೆ ಒದಗಿಸುವುದು ಮತ್ತು ಹಿಂಪಡೆಯಲಾಗುತ್ತದೆ. ಈ ನಿರ್ಧಾರವನ್ನು ರಾಜಕಾರಣಿಗಳು ತೆಗೆದುಕೊಳ್ಳುವುದಿಲ್ಲ. ಗೃಹ ಇಲಾಖೆ ತೀರ್ಮಾನ ಕೈಗೊಳ್ಳುತ್ತದೆ’ ಎಂದು ಹೇಳಿದರು.

ಎಸ್‌ಪಿಜಿ ಭದ್ರತೆ ಹಿಂಪಡೆದ ವಿಚಾರ ಮಂಗಳವಾರ ಸಂಸತ್‌ನ ಉಭಯ ಸದನಗಳಲ್ಲೂ ಪ್ರತಿಧ್ವನಿಸಿತ್ತು. ಈ ವಿಚಾರವಾಗಿ ಕಾಂಗ್ರೆಸ್ ಸದಸ್ಯರು ಮಂಗಳವಾರ ಲೋಕಸಭೆಯಲ್ಲಿತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ADVERTISEMENT

ಬುಧವಾರ ಬೆಳಿಗ್ಗೆ ಸೋನಿಯಾ ಗಾಂಧಿ ಸಂಸದರ ಸಭೆ ನಡೆಸಿ ಸಂಸತ್‌ನಲ್ಲಿ ಚರ್ಚೆ ನಡೆಸಬೇಕಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಆರ್ಥಿಕ ಹಿಂಜರಿತ, ರೈತರ ಸಮಸ್ಯೆಗಳು, ನಿರುದ್ಯೋಗ ಮತ್ತಿತರ ಸಮಸ್ಯೆಗಳ ಬಗ್ಗೆ ಚರ್ಚಸಿಲು ತೀರ್ಮಾನಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.