ಲೋಕಸಭೆ ಅಧಿವೇಶನ
ನವದೆಹಲಿ: ಸಂವಿಧಾನ ಜಾರಿಗೆ ಬಂದು 75ನೇ ವರ್ಷ ಆಗುತ್ತಿರುವ ಸಂದರ್ಭದಲ್ಲಿ ಶುಕ್ರವಾರ ಲೋಕಸಭೆಯಲ್ಲಿ ಎರಡು ದಿನಗಳ ಚರ್ಚೆ ಪ್ರಾರಂಭ ಆಗಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಗೆ ಶನಿವಾರ ಉತ್ತರ ನೀಡಲಿದ್ದಾರೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಶುಕ್ರವಾರ ಚರ್ಚೆ ಪ್ರಾರಂಭಿಸಲಿದ್ದಾರೆ ಎಂದು ಸಂಸತ್ ಮೂಲಗಳು ತಿಳಿಸಿವೆ.
ಈ ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಅವರು ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.