ADVERTISEMENT

ಜ. 31ರಿಂದ ಬಜೆಟ್‌ ಅಧಿವೇಶನ

ಪಿಟಿಐ
Published 13 ಜನವರಿ 2023, 12:18 IST
Last Updated 13 ಜನವರಿ 2023, 12:18 IST
ಪ್ರಲ್ಹಾದ್‌ ಜೋಷಿ
ಪ್ರಲ್ಹಾದ್‌ ಜೋಷಿ   

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನವು ಜನವರಿ 31ರಿಂದ ಆರಂಭವಾಗಲಿದೆ. ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡಲಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆಬ್ರುವರಿ 1ರಂದು ಬಜೆಟ್‌ ಮಂಡಿಸಲಿದ್ದಾರೆ.

‘ಏಪ್ರಿಲ್‌ 6ರ ವರೆಗೆ ಅಧಿವೇಶನವು ನಡೆಯಲಿದ್ದು, ಅಧಿವೇಶನದ ಮೊದಲ ಭಾಗವು ಫೆಬ್ರುವರಿ 14ಕ್ಕೆ ಅಂತ್ಯಗೊಳ್ಳಲಿದೆ. ಮಾರ್ಚ್‌ 12ಕ್ಕೆ ಎರಡೇ ಭಾಗದ ಅಧಿವೇಶನವು ಪ್ರಾರಂಭವಾಗಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್‌ ಜೋಷಿ ಅವರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.