ಸಂಸತ್ ಭವನ
-ಪಿಟಿಐ ಚಿತ್ರ
ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನವು ಜನವರಿ 31ರಿಂದ ಫೆಬ್ರುವರಿ 9ರವರೆಗೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜ.31ರಂದು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಈ ಅಧಿವೇಶನದಲ್ಲಿ ಫೆ.1ರಂದು ಕೇಂದ್ರ ಸರ್ಕಾರವು ಲೇಖಾನುದಾನಕ್ಕೆ ಒಪ್ಪಿಗೆ ಪಡೆಯಬಹುದು ಅಥವಾ ಮಧ್ಯಂತರ ಬಜೆಟ್ ಮಂಡಿಸಬಹುದು. ಹೊಸ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.
17ನೇ ಲೋಕಸಭೆಯ ಅವಧಿ ಜೂನ್ 16ರಂದು ಕೊನೆಗೊಳ್ಳಲಿದ್ದು, ಸಾರ್ವತ್ರಿಕ ಚುನಾವಣೆ ಘೋಷಣೆಯಾಗುವ ಮುನ್ನ ನಡೆಯುವ ಕೊನೆಯ ಅಧಿವೇಶನ ಇದಾಗಿದೆ.
2019ರಲ್ಲಿ ಲೋಕಸಭೆ ಚುನಾವಣೆಯನ್ನು ಮಾರ್ಚ್ 10 ರಂದು ಘೋಷಿಸಲಾಗಿತ್ತು. ಏಪ್ರಿಲ್ 11 ಮತ್ತು ಮೇ 19ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.