ADVERTISEMENT

ರಾಷ್ಟ್ರಪತಿ ಚುನಾವಣೆಯಂದೇ ಸಂಸತ್ತಿನ ಮುಂಗಾರು ಅಧಿವೇಶನ ಶುರು?

ಪಿಟಿಐ
Published 14 ಜೂನ್ 2022, 13:53 IST
Last Updated 14 ಜೂನ್ 2022, 13:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಸಂಸತ್ತಿನ ಉಭಯ ಸದನಗಳ ಮುಂಗಾರು ಅಧಿವೇಶನವು ಜುಲೈ 3ನೇ ವಾರದಲ್ಲಿ ಆರಂಭವಾಗುವ ಸಾಧ್ಯತೆಯಿದ್ದು, ಆಗಸ್ಟ್ 2ನೇ ವಾರದಲ್ಲಿ ಮುಕ್ತಾಯವಾಗುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಅಂತಿಮ ನಿರ್ಧಾರ ಇನ್ನಷ್ಟೇ ಕೈಗೊಳ್ಳಬೇಕಿದೆ.

ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿರುವ ಜುಲೈ 18ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗುವ ನಿರೀಕ್ಷೆಯಿದೆ. ಆಗಸ್ಟ್ 12ರಂದು ಅಧಿವೇಶನ ಅಂತ್ಯವಾಗಲಿದೆ. ಸಂಸತ್ತಿನ ವ್ಯವಹಾರಗಳಿಗೆ ಸಂಬಂಧಿಸಿದ ಸಂಪುಟ ಸಮಿತಿಯು ಅಧಿವೇಶನದ ಈ ದಿನಾಂಕಗಳನ್ನು ಶಿಫಾರಸು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT