ಚಂಡೀಗಡ: ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರಿಗೆ 40 ದಿನಗಳ ಪೆರೋಲ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
'ಫರ್ಲೋ' ( ದೀರ್ಘಾವಧಿ ಜೈಲು ಶಿಕ್ಷೆಗೆ ಒಳಗಾಗಿರುವವರಿಗೆ ತಾತ್ಕಾಲಿಕ ಬಿಡುಗಡೆ) ಮೇಲೆ ಹರಿಯಾಣದ ರೋಹ್ಟಕ್‌ನ ಸುನಾರಿಯಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
40 ದಿನಗಳ ಪೆರೋಲ್ ಮೇಲೆ ಬಿಡುಗಡೆಯಾಗಲಿರುವ 57 ವರ್ಷದ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು ಡೇರಾದಲ್ಲಿ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿರ್ಸಾ ಆಶ್ರಮದಲ್ಲಿ ಇಬ್ಬರು ಮಹಿಳಾ ಅನುಯಾಯಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಗುರ್ಮೀತ್ ಅವರು 20 ವರ್ಷಗಳ ಜೈಲುಶಿಕ್ಷೆಗೆ ಈಡಾಗಿದ್ದರು.
ಜನವರಿಯಲ್ಲಿ ದೆಹಲಿಯ ವಿಧಾನಸಭೆ ಚುನಾವಣೆಗೂ ಮುನ್ನ 30 ದಿನಗಳ ಪೆರೋಲ್ ಪಡೆದಿದ್ದ ಸಿಂಗ್ ಏಪ್ರಿಲ್‌ನಲ್ಲೂ 21 ದಿನಗಳ ಪೆರೋಲ್ ಗಿಟ್ಟಿಸಿಕೊಂಡಿದ್ದರು.
ಕಳೆದ ವರ್ಷವೂ ಅಕ್ಟೋಬರ್‌ನಲ್ಲಿ ಹರಿಯಾಣ ಚುನಾವಣೆಗೂ ಮುನ್ನ 30 ದಿನಗಳ ಪೆರೋಲ್ ಮೇಲೆ ಬಿಡುಗಡೆಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.